No menu items!
12.3 C
Munich
Thursday, April 30, 2026

ಪ್ರಚಾರಕ್ಕೆ ಆಗಮಿಸಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು !

Must read

ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಹಿರೇಗೌಜ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದರು.

ಆ ವೇಳೆ ಗ್ರಾಮಸ್ಥರೆಲ್ಲಾ ಮುತ್ತಿಗೆ ಹಾಕಿ, ಇಷ್ಟು ದಿನ ಎಲ್ಲಿ ಹೋಗಿದ್ದೀರಿ. ಮತ ಕೇಳಲು ನಿಮಗೆ ಯಾವ ನೈತಿಕತೆ ಇದೆ. ನೀರು ಕೊಡದಿದ್ದರೆ ಯಾರಿಗೂ ಮತ ಹಾಕುವುದಿಲ್ಲ. ನೀರು ಕೊಟ್ಟ ನಂತರ ಗ್ರಾಮದೊಳಗೆ ಕಾಲಿಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಗ್ರಾಮಸ್ಥರ ಆಕ್ರೋಶ ಹೆಚ್ಚಾದ ಹಿನ್ನಲೆಯಲ್ಲಿ ಶೋಭಾ ಅವರು ಅಲ್ಲಿಂದ ತೆರಳಿದ್ದಾರೆ. ಇದೇರೀತಿ ನಿನ್ನೆ ಕೂಡ ಶೋಭಾ ಕರಂದ್ಲಾಜೆ ಅವರಿಗೆ ಕಡೂರು ತಾಲೂಕಿನ ಬಿದರೆ ಗ್ರಾಮದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article