ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ನಡುವೆ ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಬಿಎನ್ಎಸ್ 353(2)ರಡಿ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.