No menu items!
15 C
Munich
Saturday, June 13, 2026

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದ ಅಣ್ಣಾಮಲೈ

Must read

ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಎಸ್‍ಐಟಿ ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ.
ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅವರು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article