No menu items!
12.1 C
Munich
Saturday, September 12, 2026

ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ ಗೂ ಸಂಬಂಧ ಇಲ್ಲ !

Must read

ಯಾದಗಿರಿ: ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಅವರು, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ ಎಂದು ಪ್ರಶ್ನಿಸಿದರು. ಅಲ್ಲದೆ, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಸಂಬಂಧ ಇಲ್ಲ ಎಂದರು.
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ? ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

- Advertisement -spot_img

More articles

- Advertisement -spot_img

Latest article