ಪ್ರಜ್ವಲ್ ರೇವಣ್ಣನನ್ನು 6 ದಿನಗಳ ಎಸೈಟಿ ಕಸ್ಟಡಿಗೆ ನೀಡಿದ ನ್ಯಾಯಾಧೀಶರು

Date:

ಬೆಂಗಳೂರು: ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣರನ್ನು ಹಾಜರುಪಡಿಸಲಾಗಿತ್ತು. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಭಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್‌ 6 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿದೆ. ತಡರಾತ್ರಿ ಜರ್ಮನಿಯ ಮ್ಯೂನಿಕ್‌ನಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಜ್ವಲ್‌ ಅವರನ್ನು ಪೊಲೀಸರು ಬಂಧಿಸಿ ಸಿಐಡಿ, ಎಸ್‌ಐಟಿ ಕಚೇರಿಗೆ ಕರೆ ತಂದರು.
ಎಸ್‌ಐಟಿ ಕಚೇರಿಯಲ್ಲೇ ರಾತ್ರಿ ಕಳೆದ ಪ್ರಜ್ವಲ್‌ ಅವರನ್ನು ಇಂದು ಬೆಳಗ್ಗೆ ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆ ತುರ್ತು ನಿಗಾ ಘಟಕದ ಕಟ್ಟಡದಲ್ಲಿ ಬಿಪಿ, ಶುಗರ್, ಪಲ್ಸ್, ಹಾರ್ಟ್ ರೇಟ್, ಯೂರಿನ್, ರಕ್ತ ಪರೀಕ್ಷೆ ನಡೆಸಲಾಯಿತು. ಈ ಪರೀಕ್ಷೆಯ ನಂತರ ಪೊಲೀಸರು 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ವಿಚಾರಣೆ ವೇಳೆ ಎಸ್‌ಐಟಿ 15 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿತ್ತು. ಮಧ್ಯಾಹ್ನದ ನಂತರ ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್‌ 6 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿತು.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...