ಪ್ರಜ್ವಲ್ ರೇವಣ್ಣ ಜೂನ್ 10ರ ತನಕ ಎಸ್ ಐಟಿ ವಶಕ್ಕೆ

Date:

ಬೆಂಗಳೂರು: ಖಾಸಗಿ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ. ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಜೂನ್ 10 ರವರೆಗೆ ಕಸ್ಟಡಿಗೆ ನೀಡಿದೆ.
ಎಸ್‍ಐಟಿ ಪರ ವಕೀಲರು ತನಿಖೆಗೆ ಸಮಯ ಸಾಕಾಗಿಲ್ಲ. ಮೊಬೈಲ್ ವಿಚಾರವಾಗಿ ಮಾಹಿತಿ ಇನ್ನೂ ಕೂಡ ಸಿಕ್ಕಿಲ್ಲ. ಮುಖ್ಯವಾಗಿ ಟೈಂ ಶಾರ್ಟೆಜ್ ಆಗಿದೆ. ವಿದೇಶದಲ್ಲಿ ಇದ್ದಾಗ ಹಣ ಹೇಗೆ ಸಂದಾಯ ಆಗಿದೆ ಗೊತ್ತಾಗಿಲ್ಲ. ಇವರು ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದು, ಇವರಿಗೆ ಹಣ ನೀಡಿದವರು ಯಾರು ಗೊತ್ತಾಗಬೇಕು.
ಕೆಲವು ಸಂತ್ರಸ್ತೆಯರು, ಸಾಕ್ಷಿಗಳನ್ನು ಮುಖಾಮುಖಿ ಮಾಡಬೇಕಾಗಿದೆ. ಏನು ಕೇಳಿದ್ರೂ ಸರಿಯಾದ ಉತ್ತರವನ್ನು ನೀಡಿಲ್ಲ. ನಾನು ಏನು ಮಾಡಿಲ್ಲ ಅಂತ ಪ್ರಜ್ವಲ್ ಹೇಳುತ್ತಾ ಇದ್ದಾರೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋಗಿದ್ದರು ಹೀಗಾಗಿ ಜೂನ್ 10 ರ ತನಕ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಮತ್ತೆ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Share post:

Subscribe

spot_imgspot_img

Popular

More like this
Related

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ಏನು..?

ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ...

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಸೈಕ್ಲೋನ್ ಪ್ರಭಾವ: IMD ಯಿಂದ ಆರೆಂಜ್ ಅಲರ್ಟ್: ಹಲವು ಜಿಲ್ಲೆಗಳಲ್ಲಿ ಭಾರೀ...