No menu items!
12.1 C
Munich
Saturday, September 12, 2026

ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಲು SIT ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ

Must read

ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವನ್ನು ರಚಿಸಿದೆ. ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರಾಗಿರುತ್ತಾರೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಅಂಬಿಕಾ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article