ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಹಂಚಿದವರಿಗೂ ಶುರುವಾಯ್ತ ನಡುಕ.!
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸ ಬೆಳವಣಿಗೆಯೊಂದು ನಡೆದಿದೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಹಂಚಿದವರ ವಿರುದ್ಧವೂ ಈಗ ಕಾನೂನು ಕ್ರಮ ಜರುಗಿಸಲು ಎಸ್ಐಟಿ ಅಧಿಕಾರಿಗಳು ತಯಾರಾಗಿದ್ದಾರೆ.
ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವೇಳೆ, ಕೆಲವರು ಹಾಸನದಲ್ಲಿ ಪೆನ್ಡ್ರೈವ್ ಹಂಚಿ ಹಬ್ಬವನ್ನೇ ಮಾಡಿದ ಬಗ್ಗೆ ತನಿಖೆ ನಡೆಸಲಾಗಿದ್ದು, ಇವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದೆ. ನಿಗದಿಯಂತೆ ಮುಂದಿನ ವಾರದೊಳಗಾಗಿ ಈ ಆರೋಪಿಗಳ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸುವ ಸಾಧ್ಯತೆ ಇದೆ.
ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಆರು ಪ್ರತ್ಯೇಕ ಪ್ರಕರಣಗಳ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ಹೊಳೆನರಸಿಪುರ ಪ್ರಕರಣದಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ, ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ತೀರ್ಪಿನ ಹಂತದಲ್ಲಿದೆ. ಅಲ್ಲದೆ, ಮತ್ತೊಂದು ಪ್ರಕರಣ ಈಗ ಟ್ರಯಲ್ ಹಂತದಲ್ಲಿದೆ. ಹಾಸನ ಜಿಲ್ಲೆಯಾದ್ಯಂತ ಹಂಚಲ್ಪಟ್ಟಿದ್ದ ವಿವಿಧ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡಿದವರಿಗೆ ಎಸ್ಐಟಿ ಇದೀಗ ಕಾನೂನು ಬಲೆ ಬೀಸಲು ಮುಂದಾಗಿದ್ದು, ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ.