Home ಎಲ್ಲೆಲ್ಲಿ ಏನೇನು.? ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್‌ ದಾಖಲು !

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್‌ ದಾಖಲು !

0
ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್‌ ದಾಖಲು !

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹೊಸದಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದಾಖಲಾದ ಎರಡನೇ ಪ್ರಕರಣವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ವಿಡಿಯೋದಲ್ಲಿದ್ದ ಕೆಲ ಮಹಿಳೆಯರನ್ನು ಸಂಪರ್ಕಿಸಿ ದೂರು ನೀಡುವಂತೆ ಹೇಳಿದ್ದರು. ಈ ಪೈಕಿ ಮಹಿಳೆಯೊಬ್ಬರು ಎಸ್ಐಟಿ ಅಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆ ಆಧರಿಸಿ ಅಧಿಕಾರಿಗಳು ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆಗೊಳಿಸುವ ಮೂಲಕ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರಜ್ವಲ್ ರೇವಣ್ಣ ಹಲವು ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಸಿಆರ್ಪಿಸಿ 164 ಅಡಿಯಲ್ಲಿ ಹೇಳಿಕೆ ದಾಖಲಿಸಲಾಗಿದೆ.