No menu items!
16.8 C
Munich
Friday, August 21, 2026

ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್

Must read

ನವದೆಹಲಿ:ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಕೆಲಸ ಮುಗಿದಿದ್ದು ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಪ್ರಣಾಳಿಕೆ ಜಾರಿಗೆ ಯೋಗ್ಯವಾಗಿರಬೇಕು, ಭರವಸೆ ನೀಡಿದ ಮೇಲೆ ಈಡೇರಿಸುವಂತಿರಬೇಕು ಆ ದೃಷ್ಟಿಕೋನದಲ್ಲಿ ನಾವು ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳಿದೆ ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಸಣ್ಣದಾದ ಸುಳಿವು ಮಾತ್ರ ಬಿಟ್ಟುಕೊಟ್ಟಿದ್ದಾರೆ. ಒಂದು ದೇಶ, ಒಂದು ಚುನಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. ಒಂದು ದೇಶ ಒಂದು ಚುನಾವಣೆ ನಡೆಯಬೇಕು ಎನ್ನುವುದು ಎಲ್ಲರ ಅಭಿಪ್ರಾಯ. ಬಹಳಷ್ಟು ಜನರ ಇದರ ಪರವಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಣಾಳಿಕೆಯಲ್ಲಿ ಒಂದು ದೇಶ ಒಂದು ಚುನಾವಣೆ ಉಲ್ಲೇಖವಿರುವ ಸುಳಿವು ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article