ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಕನಸು ಕಾಣುತ್ತಿದ್ದಾರೆ. ಹಿಂದೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನೀಡಿದ ಯಾವುದೇ ಯೋಜನೆಗಳು ಜನರಿಗೆ ತಲುಪಿಲ್ಲ. ಅವರಿಗೆ ಜನರ ನಾಡಿಮಿಡಿತವೇ ಗೊತ್ತಿಲ್ಲ ಸಿದ್ದರಾಮಯ್ಯ ಮೊದಲು ಪ್ರತಿಪಕ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಜಗದೀಶ್ ಶೆಟ್ಟರ್ ಟೀಕೆ ಮಾಡಿದ್ದಾರೆ .
ಅಹಂಕಾರದಿಂದ ಮಾತನಾಡುವ ಸಿದ್ದರಾಮಯ್ಯರ ನಾಯಕತ್ವ ಅಂತ್ಯ ಕಾಲಕ್ಕೆ ಬಂದಿದೆ. ಫಲಿತಾಂಶದ ಬಳಿಕ ಬಿಜೆಪಿ ಸರಕಾರವೇ ಮುಂದುವರಿಯಲಿದೆ. ಉಪ ಚುನಾವಣೆಯ ಫಲಿತಾಂಶ ಬಂದ ಮೇಲೆ ಎಲ್ಲವೂ ತಿಳಿಯುತ್ತದೆ ಬಿಜೆಪಿ ಸರ್ಕಾರವೇ ನಡೆಯುತ್ತಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ .