ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

Date:

ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ: ಡಿ.ಕೆ. ಶಿವಕುಮಾರ್

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 5-10 ಕಿ.ಮೀ ಪಾದಯಾತ್ರೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.
“ಮನರೇಗಾ ಉಳಿಸಿ ಅಭಿಯಾನವನ್ನು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಚರ್ಚೆ ಮಾಡಲು ಎರಡು ದಿನ ವಿಶೇಷ ಅಧಿವೇಶನ ಕರೆಯುವ ಆಲೋಚನೆ ಸಹ ಇದೆ. ಆಮೂಲಕ ಇದರಿಂದ ಗ್ರಾಮೀಣ ಪ್ರದೇಶದ ಮೇಲೆ ಹೇಗೆ ದುಷ್ಪರಿಣಾಮ ಬೀರಲಿದೆ ಎಂದು ಜನರಲ್ಲಿ ಅರಿವು ಮೂಡಿಸಲಾಗುವುದು. ಜ.6ರಿಂದ ಫೆ.2ರವರೆಗೆ ತಾಲ್ಲೂಕು ಮಾಟ್ಟದಲ್ಲಿ ಪಂಚಾಯತಿ ಸದಸ್ಯರನ್ನು,
ಫಲಾನುಭವಿ ಕಾರ್ಮಿಕರುಗಳನ್ನು ಒಳಗೊಂಡು ಪಾದಯಾತ್ರೆ ನಡೆಸಲಾಗುವುದು. ನರೇಗಾ ಯೋಜನೆ ಫಲಾನುಭವಿಗಳು ಸೇರಿದಂತೆ ಪ್ರತಿಯೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿಸಲಾಗುವುದು. ಮತ್ತೆ ನರೇಗಾವನ್ನು ಮರುಸ್ಥಾಪಿಸುವ ತನಕ ಹೋರಾಟ ಮಾಡಲಾಗುವುದು” ಎಂದು ವಿವರಿಸಿದರು. ಅಸ್ಸಾಂ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಪಕ್ಷ ನನಗೆ ಜವಾಬ್ದಾರಿ ನೀಡಿದ್ದು, ಇದರ ಬಗ್ಗೆ ಪಕ್ಷದ ನಾಯಕರ ಬಳಿ ಚರ್ಚೆ ನಡೆಸುತ್ತೇನೆ” ಎಂದರು.

Share post:

Subscribe

spot_imgspot_img

Popular

More like this
Related

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ಊಟ ಮಾಡಿದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ? ನಮ್ಮ ದೇಹಕ್ಕೆ ನೀರು...

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ

ಬೆಂಗಳೂರು: ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ಸೌಲಭ್ಯ: ಅಪಾರ್ಟ್‌ಮೆಂಟ್‌ಗಳಿಗೆ ಆದ್ಯತೆ ಬೆಂಗಳೂರು ನಗರದ ಬಡಾವಣೆಗಳಲ್ಲಿನ...

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ!

ಚಳಿಗಾಲದಲ್ಲಿ ಬೆಂಕಿ ಕಾಯಿಸುವಾಗ ಈ ವಿಷಯಗಳು ನೆನಪಿನಲ್ಲಿರಲಿ! ಪ್ರಸ್ತುತ ಕರ್ನಾಟಕ ಸೇರಿದಂತೆ ಹಲವಾರು...

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಸರ್ಕಾರಿ ಉದ್ಯೋಗ ನೇಮಕಾತಿ ಆದೇಶ

ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಸಿಹಿ ಸುದ್ದಿ: ಗಣರಾಜ್ಯೋತ್ಸವದಂದು ಸರ್ಕಾರಿ ಉದ್ಯೋಗ ನೇಮಕಾತಿ...