ಪ್ರತ್ಯೇಕ ಹುಣಸೂರು ಜಿಲ್ಲೆಗೆ ಹೆಚ್ಚಾಯಿತು ಒತ್ತಡ

Date:

ಹುಣಸೂರು ವಿಧಾನಸಭೆ ಉಪ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಇದಕ್ಕಾಗಿ ರಾಜಕೀಯದಲ್ಲಿ ವೈರಿಗಳಾಗಿ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹಾಗೂ ಹುಣಸೂರು ಕಾಂಗ್ರೆಸ್ ಶಾಸಕ ಎಚ್.ಪಿ. ಮಂಜುನಾಥ್ ಒಂದಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನದ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ವಿಶ್ವನಾಥ್, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಹುಣಸೂರು ತಾಲ್ಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡುವಂತೆ ಒತ್ತಡ ಹೇರಿದ್ದರು. ಅಲ್ಲದೇ ಹುಣಸೂರು ಉಪ ಚುನಾವಣೆ ಸಂದರ್ಭದಲ್ಲೇ ಇದೇ ವಿಷಯವನ್ನು ವಿಶ್ವನಾಥ್ ಚುನಾವಣಾ ಪ್ರಚಾರದ ಅಸ್ತ್ರವಾಗಿ ಬಳಸಿಕೊಂಡಿದ್ದರು. ಆದರೆ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಈ ವಿಚಾರದ ಕುರಿತು ಯಾವುದೇ ಚರ್ಚೆ ನಡೆದಿರಲಿಲ್ಲ.

ಆದರೀಗ ಮತ್ತೊಮ್ಮೆ ಹುಣಸೂರು ಪ್ರತ್ಯೇಕ ಜಿಲ್ಲೆ ಕೂಗು ಕೇಳಿ ಬಂದಿದ್ದು, ಹುಣಸೂರು ತಾಲೂಕನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಸಲುವಾಗಿ ಉಪ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳಾಗಿದ್ದ ಎಂಎಲ್‌ಸಿ ಎಚ್. ವಿಶ್ವನಾಥ್ ಹಾಗೂ ಕಾಂಗ್ರೆಸ್ ಶಾಸಕ ಎಚ್.ಪಿ. ಮಂಜುನಾಥ್ ಒಂದಾಗಿದ್ದಾರೆ. ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ಗೆ ಮನವಿ ಸಲ್ಲಿಸಲು ಇಬ್ಬರು ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮೈಸೂರು ಜಿಲ್ಲೆಯ ಒತ್ತಡ ಕಡಿಮೆ ಮಾಡಲು ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಜಂಟಿಯಾಗಿ ಇಬ್ಬರು ನಾಯಕರು ಘೋಷಣೆ ಮಾಡಿದ್ದು, ಇದೇ ವಿಚಾರವನ್ನು ಮುಂದಿನ ಅಧಿವೇಶನದಲ್ಲೂ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...