ಪ್ರಥಮ ಸ್ಥಾನ – ದಕ್ಷಿಣ ಕನ್ನಡ, ದ್ವೀತಿಯ ಸ್ಥಾನ- ಉಡುಪಿ

Date:

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...