No menu items!
18.6 C
Munich
Tuesday, April 28, 2026

ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ: ಕಿಟಕಿಯ ಗಾಜು ಪುಡಿ ಪುಡಿ

Must read

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಈ ಹಿಂದೆ ಪ್ರದೀಪ್ ಈಶ್ವರ್ ಚಾಲೆಂಜ್ ಮಾಡಿದ್ದರು. ಸದ್ಯ ನಿನ್ನೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ನಿನ್ನೆ ರಾತ್ರಿ ಪ್ರದೀಪ್ ಈಶ್ವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಹೌದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ನಿನ್ನೆ ರಾತ್ರಿ ಪ್ರದೀಪ್ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಇನ್ನು ಘಟನೆ ಸಂಬಂಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.
ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ

- Advertisement -spot_img

More articles

- Advertisement -spot_img

Latest article