ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅವರು, ರಾಜ್ಯದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಆ ನಂತರವೂ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನೆರವು ಬಾರದಿದ್ದರೆ ಹೋರಾಟ ಮಾಡುವುದಾಗಿ ಹೇಳಿದರು.
ಹೋರಾಟ ಮಾಡುವುದರಲ್ಲಿ ನಾವು ಹಿಂದೆ ಬೀಳುವುದಿಲ್ಲ. ಯಾವುದೇ ದಾಕ್ಷಿಣ್ಯವೂ ಇಲ್ಲ. ಹೋರಾಟ ಮಾಡುವುದನ್ನು ಯಾರಿಂದಲೂ ಕಲಿಯಬೇಕಾಗಿಲ್ಲ, ಕಾಂಗ್ರೆಸ್‍ನವರು ಪ್ರತಿಭಟನೆ ಮಾಡಿದರೆ ಸಂತೋಷ ಎಂದರು.