ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಇಬ್ಬರು ಟಾರ್ಗೆಟ್: ಸಿಎಂ ಸಿದ್ದರಾಮಯ್ಯ

Date:

ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಇಬ್ಬರು ಟಾರ್ಗೆಟ್: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ಮೋದಿ ಅವರಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಇಬ್ಬರು ಟಾರ್ಗೆಟ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ , ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದರು.
ಇನ್ನೂ ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಪುನ: ಸೇರ್ಪಡೆಗೊಳ್ಳಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನಿನ್ನೆ ಕೇಳಿದ್ದಾರೆ. ಚುನಾವಣೆ ಮುಗಿದ ಮೇಲೆ ಪರಿಶೀಲನೆ ಮಾಡೋಣ ಎಂದು ಹೇಳಿದ್ದೇನೆ ಎಂದರು.
ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನ: ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಈ ಬಗ್ಗೆ ತಿಳಿಸಿರುವುದಾಗಿ ಸುದ್ದಿಗಾರರು ತಿಳಿಸಿದಾಗ ಈ ಬಗ್ಗೆ ಅವರನ್ನೇ ಕೇಳಿ. ನನಗೆ ತಿಳಿದ ಮಟ್ಟಿಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...