ಬೆಂಗಳೂರು: ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಪರ್ಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿ ವಾಯುಪಡೆಯ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಪ್ರಯಾಣ ಕೈಗೊಂಡ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ, ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ಸಚಿವರುಗಳು, ಶಾಸಕರು ಹಾಗೂ ಮಾಜಿ ಸಚಿವರು, ಶಾಸಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆತ್ಮೀಯ ಬೀಳ್ಕೊಡುಗೆ
Date: