ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗಳಿಸಿ ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.
ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಂದಿನ ಹೊಸ ಸರ್ಕಾರ ರಚನೆ ಆಗುವವರೆಗೆ ನೀವು ಮತ್ತು ನಿಮ್ಮ ಸಚಿವ ಸಂಪುಟ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.