ಪ್ರಯಾಣಿಕರಿಗೆ ಶಾಕ್: ರಾಜ್ಯದಲ್ಲಿ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳಕ್ಕೆ ಸಂಪುಟ ಅಸ್ತು!

Date:

ಪ್ರಯಾಣಿಕರಿಗೆ ಶಾಕ್: ರಾಜ್ಯದಲ್ಲಿ ಬಸ್ ಟಿಕೆಟ್ ದರ ಶೇ.15 ರಷ್ಟು ಹೆಚ್ಚಳಕ್ಕೆ ಸಂಪುಟ ಅಸ್ತು!

ಬೆಂಗಳೂರು: 2024ಕ್ಕೆ ಗುಡ್ ಬೈ ಹೇಳಾಗಿದೆ. 2025ನೇ ಹೊಸವರ್ಷಕ್ಕೆ ಹಾಯ್ ಹಾಯ್ ಹೇಳಾಗಿದೆ. ಜಗತ್ತಿನಾದ್ಯಂತ ಹೊಸ ವರ್ಷ ಕಾಲಿಟ್ಟಾಗಿದ್ದದು, ಅದ್ಧೂರಿ ಸ್ವಾಗತ ಸಿಕ್ಕಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹೊಸವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಇದೀಗ ರಾಜ್ಯದ ಜನರಿಗೆ ಶಾಖಿಂಗ್‌ ನ್ಯೂಸ್‌ ಬಂದಿದೆ.
ಹೌದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಇಂದು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಡಬ್ಲ್ಯುಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಈ ಹಿಂದೆ ಶೇ. 40 ರಷ್ಟು ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಡೀಸೆಲ್ ಬೆಲೆಯ ಏರಿಕೆಯನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಚಿವ ಸಂಪುಟ ಸಭೆ ಬಳಿಕ ಸರ್ಕಾರ ಅಧಿಕೃತವಾಗಿ ಘೋಷಿಸಲಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...