ಪ್ರಸ್ತುತ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇಂದು ಹಣ ಇಲ್ಲ !

Date:

ಶಿವಮೊಗ್ಗ: ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅಲ್ಪಸಂಖ್ಯಾಂತರ ಅಭಿವೃದ್ಧಿಗೆ ತೋರಿಸುವ ಉತ್ಸಾಹವನ್ನು ಸಂಕಷ್ಟದಲ್ಲಿ ಇರುವ ರೈತರಿಗೆ ತೋರಿಸಬಹುದಾಗಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬಿಜೆಪಿ ಸರ್ಕಾರ ಇದ್ದಾಗ ನೆರೆ ಪರಿಹಾರ ಹಾಗೂ ತೋಟಗಾರಿಕೆಗಾಗಿ 24 ಸಾವಿರ ರೂ. ಹಣವನ್ನು ರೈತರಿಗೆ ನೀಡಿದ್ದರು.
ಭತ್ತ ಬೆಳೆದ ರೈತರಿಗೆ ಹೆಕ್ಟೇರ್ಗೆ 14 ಸಾವಿರ ರೂ. ನೀಡಿದ್ದರು. ಮಳೆಯಿಂದ ಮನೆ ಕಳೆದುಕೊಂಡಿದ್ದ ಬಡವರ‌ ಮನೆ ನಿರ್ಮಾಣಕ್ಕಾಗಿ 4 ಲಕ್ಷ ರೂ. ನೀಡಿದ್ದರು. 800 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಸಹ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಿಎಂ ಅವರು ಕೇಂದ್ರದ ಹಣಕ್ಕಾಗಿ ಕಾದು ನಿಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದೀರಿ” ಎಂದು ಟೀಕಿಸಿದರು.
ಇನ್ನೂ “ಪ್ರಸ್ತುತ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇಂದು ಹಣ ಇಲ್ಲ. ಜಖಾನೆ ಖಾಲಿಯಾಗಿದೆ. ರೈತರಿಗೆ ಪರಿಹಾರ ನೀಡಲು ಇವರ ಬಳಿ ಹಣ ಇಲ್ಲ. ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಳ‌ ನೀಡಲು ಹಣ ಇಲ್ಲ. ಆದರೆ ಸಿಎಂರವರು ಅಲ್ಪ ಸಂಖ್ಯಾಂತರಿಗೆ 10 ಸಾವಿರ ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿ, 2 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ಬರದ ವಿಚಾರದಲ್ಲಿ ಯಾಕೆ ಇಷ್ಟೊಂದು‌ ಮೀನಾಮೇಷ ಎಣಿಸಿ, ರಾಜಕಾರಣ ಯಾಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಅಸಡ್ಡೆಯನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ ನವದೆಹಲಿ: ಕನ್ನಡ ರಾಜ್ಯೋತ್ಸವ...