ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ: ಕಾಂಗ್ರೆಸ್ ಪಾಳಯದಲ್ಲಿ “ಮುಡಾ ಮಾತು “, ಶಾಸಕಾಂಗ ಸಭೆ ಕರೆದ ಸಿಎಂ!

Date:

 

ಬೆಂಗಳೂರು:- ಮುಡಾದಲ್ಲಿ ಸೈಟ್ ಪಡೆದ ವಿಚಾರವಾಗಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಇದೇ ಪ್ರಾಸಿಕ್ಯೂಷನ್ ಆದೇಶದ ವಿರುದ್ದ ಇಡೀ ಸಂಪುಟವೇ ತಿರುಗಿ ಬಿದ್ದಿದೆ.

ಇನ್ನೊಂದೆಡೆ ಇಡೀ ಸಚಿವ ಸಂಪುಟ, ಹೈಕಮಾಂಡ್​ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ, ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಮೂಲಕ ಶಾಸಕರ ವಿಶ್ವಾಸ ಪಡೆಯಲು ಮುಂದಾಗಿದ್ದಾರೆ. ಅಲ್ಲದೇ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್​ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರುವ ಬೆನ್ನಲ್ಲೇ ಈ ಶಾಸಕಾಂಗ ಸಭೆ ಕರೆದಿರುವುದು ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಕ್ಷದ ಶಾಸಕರೇ ಬಲ. ಹೀಗಾಗಿ ಶಾಸಕರ ಸಭೆ ಕರೆದು ವಿಶ್ವಾಸಕ್ಕೆ ಪಡೆಯಲು ಮುಂದಾಗಿದ್ದಾರೆ. ಅಲ್ಲದೇ ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು ಇಡೀ ಪ್ರಕರಣದ ಬೆಳವಣಿಗೆ ಬಗ್ಗೆ ಶಾಸಕರಿಗೆ ಮನವರಿಕೆ ಮಾಡಲಿದ್ದಾರೆ. ಜೊತೆಗೆ ಮುಂದಿನ ಹೋರಾಟಗಳಿಗೆ ಶಾಸಕರ ಸಹಕಾರ ಕೋರಲಿದ್ದಾರೆ.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...