No menu items!
15 C
Munich
Friday, October 2, 2026

ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ಕುರುಬ ಮುಖಂಡ ಸಾವು!

Must read

 

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರ ನಡೆ ಖಂಡಿಸಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದಾಗಲೇ ಹೃದಯಾಘಾತದಿಂದ ಕುರುಬ ಮುಖಂಡ ಸಾವನ್ನಪ್ಪಿದ ಘಟನೆ ಜರುಗಿದೆ.

ಪ್ರೆಸ್ ಮಿಟ್ ಮಾಡುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದು ಕೋಲಾರ ಕುರುಬ ಸಂಘದ ಅಧ್ಯಕ್ಷ ರವೀಂದ್ರ ಸಾವನ್ನಪ್ಪಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಹಿನ್ನೆಲೆ ಕುರುಬ ಸಂಘವು ಕಬ್ಬನ್ ಪಾರ್ಕ್ ಒಳಗಿರುವ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು.

ಈ ವೇಳೆ ಮಾತನಾಡು ತ್ತಿದ್ದಾಗಲೇ ಏಕಾಏಕಿ ರವೀಂದ್ರ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article