ಬೆಂಗಳೂರು: ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ತಿಳಿದು ಮನನೊಂದು ಯುವಕ ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ದಿವ್ಯಾ ಎಂಬಾಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಳು. ಗಂಡ ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆ ಪಡೆದು ಕಳೆದ ಆರು ತಿಂಗಳಿನಿಂದ ಲೀವ್ ಇನ್ ರಿಲೇಷನ್ನಲ್ಲಿದ್ದರು. ವಿದ್ಯಾ ಐಟಿ ಕಂಪನಿ ಉದ್ಯೋಗಿಯಾಗಿದ್ದರೆ, ಅನ್ಬರಾಸನ್ ಫ್ಲಿಪ್ ಕಾರ್ಟ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಅನ್ಬರಾಸನ್ ಜೊತೆ ಪ್ರೀತಿಯಲ್ಲಿ ಇರುವಾಗಲೇ ವಿದ್ಯಾಗೆ ಸಂತೋಷ್ ಎಂಬ ಯುವಕನ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾಳೆ.
ಈ ವಿಚಾರ ತಿಳಿದು ವಿದ್ಯಾಗೆ ಬುದ್ಧಿ ಹೇಳಿದರೂ ಅಕೆ ಕೆಳಿರಲಿಲ್ಲ. ಇದರಿಂದ ಮನನೊಂದು ಅನ್ಬರಾಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೋಷಕರು ಮೊದಲು ಯುಡಿಆರ್ ಪ್ರಕರಣ ದಾಖಲಿಸಿದ್ದರು. ನಂತರ ಸ್ನೇಹಿತನ ಜೊತೆ ಅನ್ಬರಸನ್ ಹಾಗೂ ವಿದ್ಯಾ ಮಾತನಾಡಿರುವ ಕಾಲ್ ರೇಕಾರ್ಡ್ ಲಭ್ಯವಾಗಿದೆ. ಅದರ ಅಧಾರದ ಮೇಲೆ ಅತ್ಮಹತ್ಯೆಗೆ ಪ್ರಚೋದನೆ ಎಂದು ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಅದರಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹಾಗೂ ವಿದ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ: ಮನನೊಂದು ಯುವಕ ಅತ್ಮಹತ್ಯೆ
Date: