No menu items!
11.1 C
Munich
Wednesday, April 29, 2026

ಪ್ರೀತಿಸಿದ ಹುಡ್ಗಿ ಕಾಲ್ ಪಿಕ್ ಮಾಡಿಲ್ಲ ಅಂತ ಆತ್ಮಹತ್ಯೆ

Must read

ಪ್ರೀತಿಸಿದ ಯುವತಿ ಮೊಬೈಲ್ ಕರೆ ಸ್ವೀಕರಿಸಲಿಲ್ಲ ಎಂದು ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ  ಘಟನೆ ನಡೆದಿದೆ.

ಕೋಲಾರ ತಾಲೂಕಿನ ಶಿವಾರಪಟ್ಟಣ ಗ್ರಾಮದ ಸಮೀಪ ಘಟನೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕೊರಟಿ ಗ್ರಾಮದ ಮನೋಜ್ ಕುಮಾರ್ (34) ಆತ್ಮಹತ್ಯೆಗೆ ಶರಣಾದ ಯುವಕ.

ಯುವಕ ಶಿವಾರಪಟ್ಟಣ ಗ್ರಾಮದ ಸಮೀಪದ ಕೆಸಿ ವ್ಯಾಲಿ ಯೋಜನೆಯಡಿ ಸ್ಥಾಪಿಸಿರುವ ಪಂಪ್‍ಹೌಸ್‍ನಲ್ಲಿ ಒಂದು ವರ್ಷದಿಂದ ಜಲಗಾರನಾಗಿ ಕೆಲಸ ಮಾಡುತ್ತಿದ್ದ. ಗುರುವಾರ ರಾತ್ರಿ ಕೆಲಸಕ್ಕೆ ಆಗಮಿಸಿದ ಮನೋಜ್ ಕುಮಾರ್ ತಾನು ಪ್ರೀತಿಸುತ್ತಿದ್ದ ಯುವತಿಗೆ ಮೊಬೈಲ್ ಮೂಲಕ ಕರೆ ಮಾಡಿದ್ದಾನೆ. ಆಕೆ ಕರೆ ಸ್ವೀಕರಿಸಿಲ್ಲ. ಇದರಿಂದ ಬೇಸರಗೊಂಡು ಪಂಪ್‍ಹೌಸ್‍ನ ಕಟ್ಟಡದ ಸಮೀಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮಾಲೂರು ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article