ಶಿವಮೊಗ್ಗ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟ ಹಿನ್ನೆಲೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ (20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟ ಹಿನ್ನೆಲೆ ಆತ್ಮಹತ್ಯೆ ಶಂಕೆಯಾಗಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟ ಹಿನ್ನೆಲೆ: ವಿದ್ಯಾರ್ಥಿನಿ ಆತ್ಮಹತ್ಯೆ
Date: