ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಡೀಪ್ ಫೇಕ್ ಕಿರುಕುಳ: ಆರೋಪಿ ಮಂಥನ್ ಪಾಟೀಲ್ ಬಂಧನ

Date:

ಬೆಳಗಾವಿ: ಪ್ರೀತಿಸಲು ಒಪ್ಪದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಆರೋಪಿಯನ್ನು ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ. ಆರೋಪಿ ಖಾನಾಪುರದ ಕಾಲೇಜಿನ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ.
ಆಕೆ ಒಪ್ಪದಿದ್ದಾಗ ಆಕೆಯ ಫೋಟೋವನ್ನು ನಗ್ನ ಚಿತ್ರದ ಜೊತೆ ಸೇರಿಸಿ ಎಡಿಟ್ ಮಾಡಿ ಕಿರುಕುಳ ಕೊಟ್ಟಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೆ ಆಕೆಯ ಮೂವರು ಸ್ನೇಹಿತೆಯರ ಫೋಟೋ ಬಳಸಿ ಇದೇ ರೀತಿ ಬ್ಲಾಕ್ಮೇಲ್ ಮಾಡಿದ್ದಾನೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ ಅಲ್ಲಿ ಅಪ್ಲೋಡ್ ಮಾಡಿದ್ದಾನೆ.


ಆರೋಪಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಡೀಪ್ ಫೇಕ್ ಆಪ್ ಮಾದರಿಯ ಮತ್ತೊಂದು ಆಪ್ನಲ್ಲಿ ಫೋಟೋ ಎಡಿಟ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಈ ಸಂಬಂಧ ಯುವತಿ ಖಾನಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...