No menu items!
3.9 C
Munich
Wednesday, September 23, 2026

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ಪ್ರೇಮಿಯಿಂದ ಯುವತಿಗೆ ಕೊಲೆ ಬೆದರಿಕೆ !

Must read

ಬೆಳಗಾವಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಕಿಣೈ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಡೋಕರೆ (27) ಎಂಬ ಪಾಗಲ್ ಪ್ರೇಮಿಯ ಕಾಟದಿಂದ ಯುವತಿ ಕುಟುಂಬ ಕಂಗಾಲಾಗಿದೆ. ಯುವತಿ ಅದೇ ಗ್ರಾಮದ ಕಿಣೈಯಲ್ಲಿರುವ ಮನೆಯಲ್ಲಿ ತಾಯಿ ಜೊತೆಗೆ ವಾಸವಿದ್ದಾಳೆ. ಬಿಕಾಂ ಓದುತ್ತಿರುವ ಈಕೆ ನಿತ್ಯ ಕಾಲೇಜಿಗೆ ಹೋಗುವಾಗಲೇ ಫಾಲೋ ಮಾಡಿ ತಿಪ್ಪಣ್ಣ ರೇಗಿಸುತ್ತಿದ್ದನು.


ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಿ ನೇಹಾಳಂತೆ ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಪಾಗಲ್ ಪ್ರೇಮಿ ಕಾಟದಿಂದ ಯುವತಿ ಕಾಲೇಜಿಗೆ ಹೋಗುವುದನ್ನೇ ಬಿಟ್ಟಿದ್ದಾಳೆ. ಪ್ರೀತಿಸು, ಮದುವೆ ಆಗೆಂದು ಕಳೆದ ಮೂರು ವರ್ಷಗಳಿಂದ ಡೋಕರೆ ಪೀಡಿಸುತ್ತಿದ್ದಾನೆ.
ಮದುವೆ ಮಾಡಿಕೊಡದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೆದರಿಕೆ ಹಾಕಿದ್ದಾನೆ. ಸದ್ಯ ಕುಟುಂಬ ಮತ್ತೆ ರಕ್ಷಣೆ ಕೋರಿ ನಗರ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಇದೀಗ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ರಕ್ಷಣೆಗಾಗಿ ಯುವತಿ ಮನೆಗೆ ಓರ್ವ ಪೊಲೀಸ್ ಪೇದೆಯನ್ನು ನೇಮಿಸಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -spot_img

More articles

- Advertisement -spot_img

Latest article