ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಕುರಿತು ಸಿಹಿಸುದ್ದಿ ಕೊಟ್ಟ ಸರ್ಕಾರ

0
39

ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮುಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯಲ್ಲಿ ಮಂಜೂರಾಗಿ ಖಾಲಿ ಇರುವ ವಿಷಯ ಬೋಧನೆ ಮಾಡುವ ಶಿಕ್ಷಕರ ಹುದ್ದೆಗಳ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

2021-22ನೇ ಸಾಲಿನಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 3253 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ನೇಮಕಾತಿಗೊಳ್ಳುವ ಅತಿಥಿ ಶಿಕ್ಷಕರಿಗೆ ಗೌರವ ಧನ ಪಾವತಿ ಮಾಡಲು ಜಿಲ್ಲಾವಾರು ಮತ್ತು ತಾಲೂಕುವಾರು ಶಿಕ್ಷಕರ ಹಾಗೂ ಅನುದಾನದ ವಿವರಗಳೊಂದಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪಡೆದ ಮಾಹಿತಿಯಂತೆ ಒಟ್ಟು 5078 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ 3253 ಅತಿಥಿ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಒಟ್ಟು ಬೇಡಿಕೆ ಶೇ 64 ರಷ್ಟು ಅತಿಥಿ ಶಿಕ್ಷಕರು ಮಂಜೂರಾಗಿರುತ್ತಾರೆ.

LEAVE A REPLY

Please enter your comment!
Please enter your name here