ಸಾಕಷ್ಟು ನೀರು ಕುಡಿಯುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ಆದರೆ ಪ್ಲಾಸ್ಟಿಕ್ ಬಾಟಲಿನಿಂದ ನೀರನ್ನು ಕುಡಿಯುವುದರಿಂದ ನಿಮ್ಮ ಆರೋಗ್ಯ ಕೆಡುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮನೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಅನ್ನು ಬಳಸುತ್ತಾರೆ. ಹಾಗಾಗಿ ಅದರ ಅಡ್ಡಪರಿಣಾಮಗಳ ಬಗ್ಗೆ ತಿಳಿದುಕೊಳ್ಳಿ.
ಪ್ಲಾಸ್ಟಿಕ್ ಬಾಟಲ್ ಅನ್ನು ಸೂರ್ಯ ಕಿರಣಗಳಿಗೆ ನೇರವಾಗಿ ಹಿಡಿಯುವುದರಿಂದ ಅದರ ತಾಪಮಾನದಿಂದ ಡಯಾಕ್ಸಿನ್ ಎಂಬ ವಿಷವು ಬಿಡುಗಡೆಯಾಗುತ್ತದೆ. ಇದರಿಂದ ಸ್ತನ ಕ್ಯಾನ್ಸರ್ ಉಂಟಾಗುತ್ತದೆ.
ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಶೇಖರಿಸಿ ಇಡುವುದರಿಂದ ಬಿಪಿಎ ಎಂಬ ರಾಸಾಯನಿಕ ಬಿಡುಗಡೆಯಾಗಲಿದ್ದು, ಇದು ಮಧುಮೇಹ, ಸ್ಥೂಲಕಾಯ, ಫಲವತ್ತತೆಯ ಸಮಸ್ಯೆಗಳು ಸೇರಿದಂತೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ.
ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ನಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದು ನಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ತೊಂದರೆಗೊಳಿಸುತ್ತದೆ.
ಪ್ಲಾಸ್ಟಿಕ್ ನಲ್ಲಿ ಥಾಲೇಟ್ಸ್ ಎಂಬ ರಾಸಾಯನಿಕ ಇರುವ ಕಾರಣ, ಪ್ಲಾಸ್ಟಿಕ್ ಬಾಟಲಿನಲ್ಲಿ ನೀರು ಕುಡಿಯುವುದರಿಂದ ಲಿವರ್ ಕ್ಯಾನ್ಸರ್ ಮತ್ತು ವೀರ್ಯದ ಸಂಖ್ಯೆ ಕಡಿಮೆಯಾಗುವ ಸಾದ್ಯತೆ ಇರುತ್ತದೆ