No menu items!
24.7 C
Munich
Saturday, May 2, 2026

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸಾವು!

Must read

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸಾವು!

ಪುಣೆ:- ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದು ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ಪುಣೆಯಲ್ಲಿ ಜರುಗಿದೆ.

ಘಟನೆಯ ಪರಿಣಾಮ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭಿರ ಗಾಯಗೊಂಡಿದ್ದಾರೆ. ಮೃತರನ್ನು 1 ವರ್ಷದ ವೈಭವಿ ಪವಾರ್, 2 ವರ್ಷದ ವೈಭವ್ ಪವಾರ್ ಮತ್ತು 22 ವಿಶಾಲ್ ಪವಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಾಸೂನ್ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳೆಲ್ಲರೂ ಅಮರಾವತಿ ನಿವಾಸಿಗಳಾಗಿದ್ದು, ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಪುಣೆಗೆ ಬಂದಿದ್ದರು. ಘಟನಾ ಸ್ಥಳಕ್ಕೆ ಎಸಿಪಿ ಖಾಡೆ, ಎಸಿಪಿ ಸೋನವಾನೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇನ್ನು ಪಾನಮತ್ತನಾಗಿ ಟ್ರಕ್ ಚಲಾಯಿಸಿದ ಚಾಲಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಿರ್ದಾಕ್ಷಿಣ್ಯ ನರಹತ್ಯೆ ಪ್ರಕರಣ ದಾಖಲಿಸಲಾಗಿದೆ.

- Advertisement -spot_img

More articles

- Advertisement -spot_img

Latest article