ಫುಲ್ ಟೈಂ ಶಿಕ್ಷಣ ಮಂತ್ರಿಯೇ ನಮ್ಮ ರಾಜ್ಯದಲ್ಲಿ ಇಲ್ಲವಾಗಿದೆ !

Date:

ಬೆಂಗಳೂರು: ಫುಲ್ ಟೈಂ ಶಿಕ್ಷಣ ಮಂತ್ರಿಯೇ ನಮ್ಮ ರಾಜ್ಯದಲ್ಲಿ ಇಲ್ಲವಾಗಿದೆ. ಈ ರಾಜ್ಯಕ್ಕೆ ಫುಲ್ ಟೈಂ ಎಜುಕೇಷನ್ ಮಿನಿಸ್ಟರ್ ಅಗತ್ಯವಿತ್ತು. ಆದರೆ ಸಿಕ್ಕಿಲ್ಲ ಎಂದು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫುಲ್ ಟೈಂ ಶಿಕ್ಷಣ ಮಂತ್ರಿಯೇ ನಮ್ಮ ರಾಜ್ಯದಲ್ಲಿ ಇಲ್ಲವಾಗಿದೆ. ಈ ರಾಜ್ಯಕ್ಕೆ ಫುಲ್ ಟೈಂ ಎಜುಕೇಷನ್ ಮಿನಿಸ್ಟರ್ ಅಗತ್ಯವಿತ್ತು. ಆದರೆ ಸಿಕ್ಕಿಲ್ಲ. ಚುನಾವಣೆಯಲ್ಲಿ ಅವರ ಸಹೋದರಿ ಗೆಲ್ಲಿಸುವಲ್ಲಿ ಬ್ಯುಸಿಯಾಗಿದ್ದಾರೆ.
ಈ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯ ಹಾಳುಗಡೆವಿದೆ. 5,8,9 ನೇ ತರಗತಿಗಳಿಗೆ ಮೌಲ್ಯಮಾಪನ ಮಾಡುತ್ತೇವೆ ಎಂದು ಈ ಸರ್ಕಾರ ಹೊರಟಿತು. ನ್ಯಾಯಾಲಯದವರೆಗೂ ಪ್ರಕರಣ ಹೋಗಿದೆ. ಕೋರ್ಟ್ ಈಗ ಫಲಿತಾಂಶಕ್ಕೆ ತಡೆ ನೀಡಿದೆ. ಎಳೆ ಮಕ್ಕಳ ಮನಸ್ಥಿತಿ, ಪೋಷಕರ ಆತಂಕವನ್ನು ಈ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ವಿದ್ಯಾರ್ಥಿಗಳಿಗೆ ಮತಹಕ್ಕು ಇಲ್ಲದ ಕಾರಣ ಈ ತಾತ್ಸಾರವಾಗಿದೆ. ಮಕ್ಕಳು ಓಟ್ ಬ್ಯಾಂಕ್ ಅಲ್ಲ ಎಂದು ಈ ಧೋರಣೆ ತಳೆದಿದೆ. ಸಮಸ್ಯೆ ಪರಿಹರಿಸುವ, ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ನಮ್ಮ ಶಿಕ್ಷಣ ಸಚಿವರು ಮಾಡಲಿಲ್ಲ ಎಂದು ದೂರಿದರು.
ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣಕ್ಕೆ ಅವರಿಗೆ ಸಂಭ್ರಮಾಚರಣೆ ಮಾಡಲಾಗಿಲ್ಲ. ಹಾಗಾಗಿ ನಾವೇ ಅವರ ಸಾಧನೆಯನ್ನು ಜನರ ಮುಂದಿಡುತ್ತೇವೆ. ಶಿಕ್ಷಣ ಇಲಾಖೆಯಡಿ ಮೊದಲ ಸಾಧನೆಯೆಂದರೆ ರಾಷ್ಟ್ರೀಯ ಶಿಕ್ಷಣ ನೀತಿಗೆ ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ನೀಡಿ ರಾಜ್ಯ ಶಿಕ್ಷಣ ನೀತಿ ತರುವುದಾಗಿ ತಿಳಿಸಿತ್ತು.
ಆದರೆ, ಅದರಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಪದವಿ ವಿದ್ಯಾರ್ಥಿಗಳ ಜೀವನದ ಜೊತೆ ಸರ್ಕಾರ ಚೆಲ್ಲಾಟ ಆಡುತ್ತಿದೆ. ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಮಸುಕು ಮಾಡುತ್ತಿದೆ. ಐಸಿಎಸ್ಸಿ ಖಾಸಗಿ ಶಾಲೆಗಳು, ಖಾಸಗಿ ವಿವಿಗಳ ಬಗ್ಗೆ ಒಂದು ನೀತಿಯಾದರೆ.. ನಮ್ಮ ಸರ್ಕಾರಿ ಶಾಲೆಗಳಿಗೆ ಮತ್ತೊಂದು ನೀತಿಯಾಗಿದೆ. ಶಿಕ್ಷಣ ಸಮಿತಿಗಳನ್ನು ಸಮರ್ಥವಾಗಿ ಮುಂದುವರೆಸಲಾಗುತ್ತಿಲ್ಲ ಎಂದು ಆರೋಪಿಸಿದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...