ಫೈರಿಂಗ್ ಪ್ರಕರಣ: ಮುತ್ತಪ್ಪ ರೈ ಹೆಂಡ್ತಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

Date:

ಫೈರಿಂಗ್ ಪ್ರಕರಣ: ಮುತ್ತಪ್ಪ ರೈ ಹೆಂಡ್ತಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು!

ಬೆಂಗಳೂರು:- ರಿಕ್ಕಿ ರೈ ಮೇಲೆ ನಡೆದ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುತ್ತಪ್ಪ ರೈ ಅವರ 2ನೇ ಹೆಂಡ್ತಿ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ, ರಾಕೇಶ್‌ಮಲ್ಲಿ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಬಿಡದಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಿಕ್ಕಿ ರೈ ಮೇಲೆ 2 ಬಾರಿ ಗುಂಡಿನ ದಾಳಿ ನಡೆದಿರುವುದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ. ಬಿಡದಿ ಮನೆಯಿಂದ ಸದಾಶಿವ ನಗರ ಮನೆಗೆ ಹೊರಟಿದ್ದ ರಾತ್ರಿ 11 ಗಂಟೆ ಹೊತ್ತಿಗೆ ಫೈರಿಂಗ್ ನಡೆದಿದೆ. ಅದೃಷ್ಟವಶಾತ್ ಈ ವೇಳೆ ಕಾರಿಗೆ ಅಥವಾ ರಿಕ್ಕಿ ರೈಗೆ ಯಾವುದೇ ಗುಂಡು ತಾಗಿಲ್ಲ. ಶಬ್ಧ ಕೇಳಿ ಚಾಲಕ ಬಸವರಾಜು ಕೆಳಗೆ ಇಳಿದು ನೋಡಿದ್ದಾರೆ, ಬಳಿಕ ಪರ್ಸ್‌ ಮರೆತು ಬಂದಿರುವುದಾಗಿ ರಿಕ್ಕಿಗೆ ತಿಳಿಸಿ ಮತ್ತೆ ಮನೆಗೆ ಹೋಗಿದ್ದಾರೆ. ಬಳಿಕ ಬೆಂಗಳೂರಿಗೆ ಹೊರಡಲು ಮುಂದಾದಾಗ ರಾತ್ರಿ 12:50ರ ಸುಮಾರಿಗೆ ಮತ್ತೆ ಗುಂಡಿನ ದಾಳಿ ನಡೆದಿದೆ. ಒಟ್ಟಾರೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಲ್ಲಾ ಆಯಾಮದಲ್ಲಿ ತನಿಖೆ ಕೈಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...