ಫೈರ್ ಫ್ಲೈ ಕುಂಬಳಕಾಯಿ ಇವೆಂಟ್ ನಲ್ಲಿ ಶಿವಣ್ಣ-ಗೀತಕ್ಕ ಭಾಗಿ !

Date:

ಶಿವಣ್ಣನ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ‘ಫೈರ್‌ ಫ್ಲೈ’ಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಕುಂಬಳಕಾಯಿ ಇವೆಂಟ್ ನಲ್ಲಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಿವೇದಿತಾ ಶಿವರಾಜ್ ಕುಮಾರ್, ನಿರ್ದೇಶಕ ವಂಶಿ, ಸಂಗೀತ ನಿರ್ದೇಶಕ ಚರಣ್ ರಾಜ್, ನಾಯಕಿ ರಚನಾ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು.

ಈ ಸಿನಿಮಾದಲ್ಲಿ ಯುವ ಪ್ರತಿಭೆ ವಂಶಿ ನಾಯಕನಾಗಿ ನಟಿಸುತ್ತಿದ್ದಾರೆ. ಇದರೊಂದಿಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ‘ಫೈರ್ ಫ್ಲೈ’ನಲ್ಲಿ ವಂಶಿ ನಟ ಕಮ್ ನಿರ್ದೇಶಕನಾಗಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ವಂಶಿ ಜೊತೆ ಸುಧಾರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ ಸೇರಿದಂತೆ ಹಲವು ಹಿರಿಯ ನಟರು ಕೂಡ ಅಭಿನಯಿಸಿದ್ದಾರೆ. ಇನ್ನು ವಂಶಿಗೆ‌ ನಾಯಕಿಯಾಗಿ ರಚನಾ ಇಂದರ್ ಜೊತೆಯಾಗಿದ್ದಾರೆ.

ಫೈರ್ ಫ್ಲೈ’ ಸಿನಿಮಾಗೆ ಅಭಿಲಾಷ್ ಕಳತ್ತಿ ಕ್ಯಾಮರಾ ವರ್ಕ್ ಇದ್ದರೆ, ಚರಣ್ ರಾಜ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆಯಿದೆ.

ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ ಲ್ಯಾಂಡ್

ತಾಂತ್ರಿಕ ದೋಷ: ಲಂಡನ್–ಬೆಂಗಳೂರು ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಸುರಕ್ಷಿತ...