ಫ್ಲಿಪ್ ಕಾರ್ಟ್ ನಿಂದ ಕರ್ನಾಟಕಕ್ಕೆ 30 ವೆಂಟಿಲೇಟರ್

Date:

ಕೋವಿಡ್-19 ನಿರ್ಮೂಲನೆಗೆ ಜಾರಿಯಲ್ಲಿರುವ ಪ್ರಯತ್ನಗಳಿಗೆ ನೆರವಾಗುವ ಭಾಗವಾಗಿ ಮತ್ತು ಪರಿಹಾರ ಪ್ರಯತ್ನಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಭಾರತದ ದೇಶಿ ಇ-ಕಾಮರ್ಸ್ ಕಂಪನಿಯಾಗಿರುವ ಫ್ಲಿಪ್ ಕಾರ್ಟ್ ಇಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ಕಾರ್ಪೊರೇಷನ್ ಲಿಮಿಟೆಡ್ (ಕೆಎಸ್ಎಂಎಸ್ ಸಿಎಲ್)ಗೆ 30 ಜೀವ ರಕ್ಷಕ ಐಸಿಯು ವೆಂಟಿಲೇಟರ್ ಗಳನ್ನು ದೇಣಿಗೆಯಾಗಿ ನೀಡಿದೆ.
ಕೋವಿಡ್-19 ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲು ಮತ್ತು ಸಕಾಲದಲ್ಲಿ ನಿರ್ಣಾಯಕ ಚಿಕಿತ್ಸೆಯನ್ನು ನೀಡುವ ರಾಜ್ಯ ಸರ್ಕಾರಗಳ ಪ್ರಯತ್ನಗಳಿಗೆ ಬೆಂಬಲವಾಗಿ ನಿಲ್ಲುವ ದಿಸೆಯಲ್ಲಿ ಫ್ಲಿಪ್ ಕಾರ್ಟ್ ಈ ಐಸಿಯು ವೆಂಟಿಲೇಟರ್ ಗಳನ್ನು ಕೊಡುಗೆಯಾಗಿ ನೀಡಿದೆ. ಇದಲ್ಲದೇ, ಕೋವಿಡ್-19 ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಲೆಂದು ಫ್ಲಿಪ್ ಕಾರ್ಟ್ 250 ಮಲ್ಟಿಪ್ಯಾರಾ ಮಾನಿಟರ್‌ಗಳನ್ನೂ ಸಹ ಕರ್ನಾಟಕ ಸರ್ಕಾರಕ್ಕೆ ಪೂರೈಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಈ ವೈದ್ಯಕೀಯ ವೆಂಟಿಲೇಟರ್ ಗಳನ್ನು ಕರ್ನಾಟಕ ಸರ್ಕಾರಕ್ಕೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿದ್ದರು.
ಫ್ಲಿಪ್‌ಕಾರ್ಟ್‌ನ ಈ ನೆರವಿನ ಬಗ್ಗೆ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,”ಕೋವಿಡ್-19 ರ ಎರಡನೇ ಅಲೆಯ ವೇಳೆ ಸೋಂಕು ಹರಡದಂತೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ವಿಚಕ್ಷಣ ಮತ್ತು ಕಂಟೇನ್ಮೆಂಟ್ ಕ್ರಮಗಳನ್ನು ಕೈಗೊಂಡಿದೆ. ಆದಾಗ್ಯೂ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯವನ್ನು ಸೂಕ್ತವಾದ ರೀತಿಯಲ್ಲಿ ಬೆಂಬಲಿಸುವುದು ಮತ್ತು ನವೀಕರಿಸುವುದು ಈ ಸಂದರ್ಭದಲ್ಲಿ ಸೂಕ್ತವಾಗಿದೆ.

ಸಮುದಾಯಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೋವಿಡ್-19 ರ ವಿರುದ್ಧದ ಹೋರಾಟ ಮತ್ತು ಕರ್ನಾಟಕದಲ್ಲಿ ಕೈಗೊಂಡಿರುವ ಹಲವಾರು ಪ್ರಯತ್ನಗಳಿಗೆ ಬೆಂಬಲವಾಗಿ ಫ್ಲಿಪ್‌ಕಾರ್ಟ್‌ ನಿಂತಿರುವ ಕ್ರಮವನ್ನು ನಾನು ಪ್ರಶಂಸಿಸುತ್ತೇನೆ. ಫ್ಲಿಪ್‌ಕಾರ್ಟ್‌ 30 ಐಸಿಯು ವೆಂಟಿಲೇಟರ್‌ಗಳು ಮತ್ತು 250 ಐಸಿಯು ಮಲ್ಟಿಪ್ಯಾರಾ ಮಾನಿಟರ್‌ಗಳನ್ನು ನೀಡಿರುವುದು ನಾವು ಕೋವಿಡ್-19 ರ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ,” ಎಂದು ಅಭಿಪ್ರಾಯಪಟ್ಟರು.
ಫ್ಲಿಪ್ ಕಾರ್ಟ್ ನ ಗ್ರೂಪ್ ಸಿಇಒ ಕಲ್ಯಾಣ್ ಕೃಷ್ಣಮೂರ್ತಿ, ”ಪ್ರಸ್ತುತ ತಲೆದೋರಿರುವ ಸಾಂಕ್ರಾಮಿಕದ ವಿರುದ್ಧ ಹೋರಾಟ ನಡೆಸುತ್ತಿರುವ ವಿವಿಧ ರಾಜ್ಯ ಸರ್ಕಾರಗಳಿಗೆ ಬೆಂಬಲ ನೀಡುವುದು ಮತ್ತು ಕೋವಿಡ್ ಪರಿಹಾರ ಕ್ರಮಗಳಿಗೆ ಸಂಪನ್ಮೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಫ್ಲಿಪ್ ಕಾರ್ಟ್ ಮತ್ತು ಅದರ ತಂಡವು ಬದ್ಧವಾಗಿದೆ ಮತ್ತು ಈ ದಿಸೆಯಲ್ಲಿ ಹೆಜ್ಜೆ ಇಟ್ಟಿದೆ.

ಈ ಸವಾಲಿನ ಸಂದರ್ಭದಲ್ಲಿ ದೇಶ ಮತ್ತು ಸಮುದಾಯಕ್ಕೆ ಸಹಾಯ ಮಾಡಲು ಫ್ಲಿಪ್ ಕಾರ್ಟ್ ಹಲವಾರು ಪ್ರಯತ್ನಗಳನ್ನು ನಡೆಸುತ್ತಿದೆ. ಇದಕ್ಕಾಗಿ ನಮ್ಮ ಲಾಜಿಸ್ಟಿಕ್ ಸಾಮರ್ಥ್ಯಗಳನ್ನು ಸದುಪಯೋಗಪಡಿಸಿಕೊಳ್ಳುತ್ತಿದೆ ಮತ್ತು ಆರೋಗ್ಯ ವೃತ್ತಿಪರರ ಅತ್ಯಂತ ನಿರ್ಣಾಯಕ ಅಗತ್ಯತೆಗಳ ಕಡೆಗೆ ಸಂಪನ್ಮೂಲಗಳನ್ನು ಸಜ್ಜುಗೊಳಿಸುತ್ತದೆ. ಈ ಮೂಲಕ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಸೇವೆಗಳನ್ನು ಒದಗಿಸಲು ಬದ್ಧವಾಗಿದೆ. ಸೂಕ್ತವಾದ ವೈದ್ಯಕೀಯ ಆರೈಕೆ ಉಪಕರಣಗಳು ಲಭ್ಯವಾಗುವಂತೆ ನಾವು ವಿವಿಧ ಪಾಲುದಾರರು ಮತ್ತು ರಾಜ್ಯ ಸರ್ಕಾರಗಳೊಂದಿಗೆ ನಿಕಟವಾದ ಸಹಯೋಗವನ್ನು ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದೇವೆ. ಈ ಐಸಿಯು ವೆಂಟಿಲೇಟರ್ ಗಳು ಮತ್ತು ಪ್ಯಾರಾ ಮಾನಿಟರ್ ಗಳು ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಲು ಪೂರಕವಾಗಿವೆ ಎಂದು ನಾವು ಭಾವಿಸುತ್ತೇವೆ,” ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...