ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ, ರಾಜ್ಯದ ಅನೇಕ ಭಾಗಗಳಲ್ಲಿ ಮಳೆ ಹೆಚ್ಚಾಗಿದೆ. ಮುಂದಿನ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರೆಡ್ ಅಲರ್ಟ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು
ಆರೆಂಜ್ ಅಲರ್ಟ್: ಬೆಳಗಾವಿ, ಹಾವೇರಿ, ಹಾಸನ ಹಾಗೂ ಕೊಡಗು
ಯೆಲ್ಲೋ ಅಲರ್ಟ್: ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ಬೀದರ್ ಹಾಗೂ ಗದಗ
ಅದರ ಜೊತೆಗೆ, ರಾಮನಗರ, ತುಮಕೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.