ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆ ಮಾಡಿದಾಗಿನಿಂದ ಬಿಜೆಪಿಯೊಳಗೆ ಕೆಸರೆರಚಾಟ ಆರಂಭವಾಗಿದೆ. ಈಗಾಗಲೇ ಅನೇಕ ಶಾಸಕರು ಸಚಿವ ಸಂಪುಟ ವಿಸ್ತರಣೆ ವಿರುದ್ಧ ಚಾಟಿ ಬೀಸಿದ್ದು ಇದೀಗ ಮತ್ತೋರ್ವ ಶಾಸಕ ಸಚಿವ ಸಂಪುಟ ವಿಸ್ತರಣೆ ವಿರುದ್ಧ ದನಿ ಎತ್ತಿದ್ದಾರೆ. ಹೌದು ಕೊಡಗಿನ ಶಾಸಕ ಅಪ್ಪಚ್ಚು ರಂಜನ್ ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ.
ನಾವು ಪ್ರಾಮಾಣಿಕವಾಗಿ ಪಕ್ಷದಲ್ಲಿ ಇದ್ದುಕೊಂಡು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೇವೆ ಆದರೆ ನಮ್ಮಂತವರಿಗೆ ಸಚಿವ ಸ್ಥಾನ ಸಿಗುವುದಿಲ್ಲ, ಯಾರು ಬಕೆಟ್ ಹಿಡಿಯುತ್ತಾರೋ ಅವರಿಗೆ ಮಾತ್ರ ಸಚಿವ ಸ್ಥಾನವನ್ನು ಕೊಡಲಾಗುತ್ತಿದೆ ಎಂದು ಅಪ್ಪಚ್ಚು ರಂಜನ್ ಅವರು ಕಿಡಿಕಾರಿದ್ದಾರೆ. ಸಿಪಿ ಯೋಗೇಶ್ವರ್ ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ನನಗೆ ತಿಳಿದಿದೆ, ವಿಶ್ವನಾಥ್ ಅವರು ಚುನಾವಣೆಯಲ್ಲಿ ಸೋಲುವುದಕ್ಕೆ ಸಿಪಿ ಯೋಗೇಶ್ವರ್ ಅವರೇ ನೇರ ಹೊಣೆ, ಅಂತವರಿಗೆ ಮಂತ್ರಿಸ್ಥಾನ ಕೊಡುತ್ತಿರುವುದು ನಿಜಕ್ಕೂ ದುರಂತದ ಸಂಗತಿ ಎಂದು ಅಪ್ಪಚ್ಚುರಂಜನ್ ಹೇಳಿದ್ದಾರೆ.
ಬಿಜೆಪಿ ಗೋಸ್ಕರ ಕೆಲಸ ಮಾಡಿದವರಿಗೆ ಅನ್ಯಾಯವಾಗಿದೆ ಮುಂದಿನ ದಿನಗಳಲ್ಲಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳುತ್ತೇವೆ ಎಂದು ಅಪ್ಪಚ್ಚು ರಂಜನ್ ಅವರು ತಿಳಿಸಿದರು.