“ಬಕ್ರೀದ್ ಹಬ್ಬ ಬರುತ್ತಿದೆ. ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ. ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
“ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದೆ. ಅದಕ್ಕಾಗಿ ಗೋವುಗಳನ್ನು ಸಹ ಬಳಕೆ ಮಾಡಲಾಗುತ್ತದೆ. ಆದರೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ.” ಎಂದು ಪ್ರಭು ಚೌಹಾಣ್ ಹೇಳಿದ್ದಾರೆ.