ಬಗೆದಷ್ಟು ಬಯಲಾಗುತ್ತಿದೆ ಮುಡಾ ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಮತ್ತೊಂದು ಗಂಭೀರ ಆರೋಪ!

Date:

ಬಗೆದಷ್ಟು ಬಯಲಾಗುತ್ತಿದೆ ಮುಡಾ ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಮತ್ತೊಂದು ಗಂಭೀರ ಆರೋಪ

ಬೆಂಗಳೂರು:- ಮುಡಾದಲ್ಲಿ ಮತ್ತೊಂದು ಹಗರಣ ಬಟಾ ಬಯಲಾಗಿದ್ದು, ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್ ಅವರು ನಡೆಸಿದ್ದಾರೆ ಎನ್ನಲಾಗಿರುವ​ ಅಕ್ರಮ ಬಯಲಾಗಿದೆ. ಆಯುಕ್ತರ ಅನುಮತಿ ಇಲ್ಲದೇ ಹೆಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ.

ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಚ್.ವಿ ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ.

252 ಎಕರೆ ಜಾಗದ ಕೆಲವು ಸರ್ವೆ ನಂಬರ್​ಗಳು ವ್ಯಾಜ್ಯ ನ್ಯಾಯಾಲಯದಲ್ಲಿರುತ್ತೆ. ಹೀಗಾಗಿ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ಮುಡಾ ವರ್ಗಾವಣೆ ಮಾಡಬಾರದೆಂದು‌ ಆದೇಶವಿದೆ. ಹೀಗಿದ್ದರೂ ಹೆಚ್.ವಿ ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ‌ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿದ್ದಾರೆ.

ಅದಷ್ಟೇ ಅಲ್ಲದೆ ಆಯುಕ್ತರ ಅನುಮೊದನೆ ಇಲ್ಲದಿದ್ದರೂ ತಾಂತ್ರಿಕ ಶಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ್​​ ಪತ್ರ ಬರೆದಿರುವುದು ಬಯಲಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...