ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವೇ, ಈ ಬಾರಿಯ ಬಜೆಟ್ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪ್ರಸ್ತುತಪಡಿಸುವ ಬಗ್ಗೆ ಕೇಂದ್ರೀಕರಿಸುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಿಹಿ ಮೊಸರು ತಿನ್ನಿಸಿ ಶುಭ ಹಾರೈಸಿದ್ದಾರೆ. ರಾಷ್ಟ್ರಪತಿ ಹಾಗೂ ಅಧಿಕಾರಿಗಳೊಂದಿಗೆ ನಿಂತು ಬಜೆಟ್ ಪ್ರತಿಯೊಂದಿಗೆ ಪೋಸ್ ನೀಡಿದರು. ಬಳಿಕ ರಾಷ್ಟ್ರಪತಿ ಅವರೊಂದಿಗೆ ಬಜೆಟ್ ವಿಚಾರವಾಗಿ ಚರ್ಚೆ ನಡೆಸಿದರು.