ಬಜೆಟ್‌ ಮಂಡನೆ: ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ – ಆರ್‌.ಅಶೋಕ್‌ ಕಿಡಿ

Date:

ಬಜೆಟ್‌ ಮಂಡನೆ: ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ – ಆರ್‌.ಅಶೋಕ್‌ ಕಿಡಿ

ಬೆಂಗಳೂರು: ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ ಎಂದು ಬಜೆಟ್‌ ಮಂಡನೆ ಬಗ್ಗೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ. ಬಜೆಟ್‌ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ.
ಆದರೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು.
ಕರ್ನಾಟಕದ ಇತಿಹಾಸದಲ್ಲಿ ಒಂದೇ ವರ್ಷದಲ್ಲಿ ಅತ್ಯಧಿಕ ಅಂದರೆ 1,16,170 ಕೋಟಿ ರೂ. ಸಾಲ ಮಾಡಲಾಗಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಾಖಲೆಯಾಗಿದೆ. ಒಟ್ಟು ಸಾಲದ ಪ್ರಮಾಣ 7,81,095 ಕೋಟಿ ರೂ. ಗೆ ಏರಿದೆ. ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ಹೊಸ ಬಾರ್‌ಗಳನ್ನು ಘೋಷಿಸಲಾಗಿದೆ. ಇದನ್ನು ಕಾಂಗ್ರೆಸ್‌ ಶಾಸಕರ ಬಾಯಿ ಮುಚ್ಚಿಸಲು ಮಾಡಲಾಗಿದೆ. ಇದರಿಂದ 40,000 ಕೋಟಿ ರೂ. ಆದಾಯ ಬರಲಿದೆ. ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ. 4-5 ಸಾವಿರ ಕೋಟಿ ರೂ. ಆದಾಯ ಹೆಚ್ಚಿಸಲು ಈ ಕ್ರಮ ವಹಿಸಲಾಗಿದೆ ಎಂದರು.
ಕಳೆದ ಬಜೆಟ್‌ನಲ್ಲೂ ಯಾವುದೇ ತೆರಿಗೆ ಘೋಷಣೆ ಮಾಡಿರಲಿಲ್ಲ. ಬಳಿಕ ತೆರಿಗೆಗಳನ್ನು ಹೆಚ್ಚಿಸಲಾಯಿತು. ಈ ಬಾರಿಯೂ ಬಜೆಟ್‌ ನಂತರ ತೆರಿಗೆ ಏರಿಕೆ ಮಾಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಿದಾಗ, ಅದು ಹೆಚ್ಚುವರಿಯಾಗಿತ್ತು. ಕಾಂಗ್ರೆಸ್‌ ಕೊರತೆ ಬಜೆಟ್‌ ಮಂಡಿಸಿದೆ. 193 ಪುಟಗಳಲ್ಲಿ ಹೊಸತನವೇ ಇಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...