No menu items!
15.2 C
Munich
Sunday, May 24, 2026

ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ: ಡಿ.ಕೆ. ಶಿವಕುಮಾರ್

Must read

ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಪ್ರತಿ ಲೀಟರ್ ಗೆ ಕನಿಷ್ಠ 1 ಪೈಸೆಯಷ್ಟು ಏರಿಕೆ ಮಾಡಲೇಬೇಕಾಗಿದೆ. ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ.
ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಮುಂದಿನ ಹಂತಗಳ ಯೋಜನೆ ಕೈಗೆತ್ತಿಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯ. ಇದಕ್ಕೂ ಮುನ್ನ ಜನರಿಗೂ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕು ಎಂದರು.
ದರ ಏರಿಕೆ ಖಂಡಿಸಿ ಬಿಜೆಪಿ ನಡೆಸುತ್ತಿರುವ ಹೋರಾಟದ ಬಗ್ಗೆ ಕೇಳಿದಾಗ, “ನಾವು ವಿದ್ಯುತ್ ಬೆಲೆ ಕಡಿಮೆ ಮಾಡಿದಾಗ ಅವರು ಮಾತನಾಡಲಿಲ್ಲ. ಅವರಿಗೆ ಜನರ ಮೇಲೆ ಕಾಳಜಿ ಇದ್ದರೆ, ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆ ಕಡಿಮೆ ಇದೆ” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article