No menu items!
5.3 C
Munich
Wednesday, September 23, 2026

ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !

Must read

ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ” ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ”ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ.


ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ” ಎಂದು ಕಿಡಿಕಾರಿದ್ದಾರೆ.”ರಾಜ್ಯ ಸರ್ಕಾರವು ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು” ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

- Advertisement -spot_img

More articles

- Advertisement -spot_img

Latest article