ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿರುವ ಮಹಿಳಾ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು, ಎಂ. ಎಸ್. ಡಬ್ಲ್ಯೂ. ಎಂಎ, ಮಹಿಳಾ ಅಧ್ಯಯನ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗೆ ಆದ್ಯತೆ ನಿಡಲಾಗುತ್ತದೆ. ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಟ 3 ರಿಂದ 5 ವರ್ಷಗಳ ಅನುಭವ ಹೊಂದಿರಬೇಕು, ಅನುಭವ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ. ಅಭ್ಯರ್ಥಿಯು ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಪ್ರವಾಸ ಕೈಗೊಳ್ಳಲು ದೈಹಿಕ ಸಾಮರ್ಥ್ಯ ಹೊಂದಿರಬೇಕು.
ಅಭ್ಯರ್ಥಿಗಳು ಅರ್ಜಿಗಳನ್ನು ಉಪನಿರ್ದೇಶಕ ಕಚೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಎಸ್. ಪಿ. ಸರ್ಕಲ್ ದೇವಿನಗರ ಬಳ್ಳಾರಿ ಕಚೇರಿಯಲ್ಲಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08392-294127, 9110653738 ಕರೆ ಮಾಡಬಹುದಾಗಿದೆ.