ಲೋಕಸಭೆ ಚುನಾವಣೆ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದ್ದು, ಸಿ ವೋಟರ್ ಸಮೀಕ್ಷೆ ಪ್ರಕಾರ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಜಯಗಳಿಸುವ ಸಾಧ್ಯತೆ ಇದೆ. ಉಪ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ವಿ.ಎಸ್. ಉಗ್ರಪ್ಪ ಆಯ್ಕೆಯಾಗಿದ್ದರು.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಜಯಗಳಿಸುವ ಸಾಧ್ಯತೆ ಇದೆ.
ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ರಾಜ ಅಮರೇಶ ನಾಯಕ ಜಯಗಳಿಸಬಹುದೆಂದು ಸಿ ವೋಟರ್ ಸಮೀಕ್ಷೆಯಲ್ಲಿ ಹೇಳಲಾಗಿದೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪುನರಾಯ್ಕೆಯಾಗಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.ಸಮೀಕ್ಷೆಯೇ ಸತ್ಯವಲ್ಲ, ಮೇ 23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಕುತೂಹಲಗಳಿಗೆ ತೆರೆ ಬೀಳಲಿದೆ.