No menu items!
26.8 C
Munich
Saturday, May 23, 2026

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

Must read

ಬಳ್ಳಾರಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.

ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್–150)ಯಲ್ಲಿ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಅಪಘಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article