ಬಳ್ಳಾರಿ ಮಹಾನಗರ ಪಾಲಿಕೆಯ ಚುನಾವಣೆ: ಗಿಫ್ಟ್ ಕೊಟ್ಟು ಸೆಳೆಯುವ ಯತ್ನ

0
27

ಬಳ್ಳಾರಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೆ ಮತದಾರರಿಗೆ ಆಮಿಷ, ಉಡುಗೊರೆಗಳ ಮಹಾಪೂರವೇ ಹರಿದುಬರುತ್ತಿದೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ, ಮತದಾರರನ್ನ ಸೆಳೆಯಲು ಕಸರತ್ತು ಶುರುವಾಗಿದೆ. ಉಡುಗೊರೆ ಹಂಚುವುದು, ಆಮಿಷ ತೋರುವ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು ಇಂತಹ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬಳ್ಳಾರಿಯಲ್ಲಿ ಮಾರ್ಚ್ 28ರಂದು ಮೇಯರ್ ಮತ್ತು ಉಪಮೇಯರ್ ಚುನಾವಣೆ ನಡೆಯಲಿದೆ. ಪಾಲಿಕೆಯ ಗದ್ದುಗೆ ಏರಲು ಆಕಾಂಕ್ಷಿಗಳು ಬರಪೂರ ಉಡುಗೊರೆಗಳನ್ನು ಹಂಚುತ್ತಿದ್ದಾರೆ.ಮುಲ್ಲಂಗಿ ನಂದೀಶ್,
ಗಾದೆಪ್ಪ, ಪೇರಂ ವಿವೇಕ್ ಮತ್ತು ಪಕ್ಷೇತರ ಸದಸ್ಯ ಪ್ರಭಂಜನ್, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಆಕಾಂಕ್ಷಿಗಳಾಗಿದ್ದಾರೆ. ಮೂವರು ಪಾಲೆಕೆ ಸದಸ್ಯರ ಮನೆ – ಮನೆಗೆ ಹೋಗಿ ಊಡೂಗೊರೆ ಕೊಟ್ಟು ಬರುತ್ತಿದ್ದಾರೆ.ಮುಲ್ಲಂಗಿ ನಂದೀಶ್ ಪಾಲಿಕೆ ಸದಸ್ಯರಿಗೆ ಬೆಳ್ಳಿ ತಟ್ಟೆ ಮತ್ತು ಕಾಂಗ್ರೆಸ್ ಚಿಹ್ನೆ ಇರುವ ಬಂಗಾರದ ಚಿಕ್ಕ ಆಭರಣವನ್ನು ಉಡುಗೊರೆಯಾಗಿ ನೀಡಿದ್ದಾರೆ. ಪಕ್ಷೇತರ ಸದಸ್ಯ ಪ್ರಭಂಜನ್ ರೇಷ್ಮೆ ಪಂಚೆ, ಸೀರೆ ಮತ್ತು ಇನ್ನಿಬ್ಬರುಡ್ರೈಪ್ರೂಟ್ಸ್ ಬಾಕ್ಸ್ ನೀಡಿ ಸನ್ಮಾನ ಮಾಡುತ್ತಿದ್ದಾರೆ.