ಬೆಂಗಳೂರು: ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ನಿಯೋಗ ಮನವಿ ಮಾಡಿತ್ತು.
ಇದರ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರವನ್ನು ಬರೆದು, ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣ ನವರು ಅಸ್ಪೃಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ. ಅವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ !
Date: