ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳಾ ಪ್ರಯಾಣಿಕರ ಸಾವು

0
181

ಬಸ್ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಸ್ ಅನ್ನು ರಿವರ್ಸ್ ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.


ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ (60) ಮತ್ತು ಪಂಕಜ (50) ಮೃತ ದುರ್ದೈವಿಗಳು. ಉಚಿತ ಬಸ್ ಪ್ರಯಾಣ ಹಿನ್ನೆಲೆ ಕೆಎಸ್ಆರ್ಟಿಸಿ ಬಸ್ ಮೂಲಕ ಗೊರವನಹಳ್ಳಿ ದೇವಸ್ಥಾನಕ್ಕೆ ಹೋಗಲು ಏಳು ಮಹಿಳೆಯುರುಳ್ಳ ತಂಡ ಬಸ್ ನಿಲ್ದಾಣಕ್ಕೆ ಆಗಮಿಸಿತ್ತು. ಈ ತಂಡದಲ್ಲಿದ್ದ ಇಬ್ಬರು ಬಸ್ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಚಿಕ್ಕಬಳ್ಳಾಪುರ ಡಿಪೋಗೆ ಸೇರಿದ ಕೆಎಸ್ಆರ್ಟಿಸಿ ಬಸ್ ಚಾಲಕ ಗೋವಿಂದರಾಜು ಅವರು ಬಸ್ ಅನ್ನು ರಿವರ್ಸ್ ಹಾಕುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸದ್ಯ, ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.