ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ ನಿಧನ
ಹೈದರಾಬಾದ್: ಕನ್ನಡ, ತೆಲುಗು, ತಮಿಳು ಸೇರಿ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇಂದು ಬೆಳಗ್ಗೆ 4 ಗಂಟೆಗೆ ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ರಾವ್ ಅವರು, ಮಗನ ನಿಧನದ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಕೋಟ ರಾವ್ ಅವರು ಖಳನಾಯಕ, ಹಾಸ್ಯನಟ ಹಾಗೂ ಪೋಷಕ ಪಾತ್ರಗಳಲ್ಲಿ ತಮ್ಮದೇ ಆದ ನಟನಾ ಶೈಲಿಯಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದರು.ಮೋಹನ್ ಬಾಬು ಅವರೊಂದಿಗೆ ಸುಮಾರು 60 ಚಿತ್ರಗಳಲ್ಲಿ ಅವರು ಸೇರಿ ಅಭಿನಯಿಸಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.